Actor Kishore: ಮತ್ತೆ ಬಂದ ಕಿಶೋರ್- ಈ ಬಾರಿ ಒರಿಸ್ಸಾ ರೈಲ್ವೆ ದುರಂತದ ಬಗ್ಗೆ ಹೇಳಿದ್ದೇನು ಗೊತ್ತೇ?? ಎಲ್ಲವೂ ಮುಗಿದ ಮೇಲೆ ಕಿಶೋರ್ ಹೇಳಿದ್ದೇನು ಗೊತ್ತೇ??

Actor Kishore: ಒಡಿಶಾದಲ್ಲಿ (Odisha) ನಡೆದ ಭೀಕರ ಘಟನೆ ಬಗ್ಗೆ ನಮಗೆಲ್ಲ ಗೊತ್ತೇ ಇದೆ. ಜೂನ್ 2ರಂದು ನಡೆದ ಈ ಘಟನೆ ಸಾವಿರಾರು ಜನರ ಜೀವನಕ್ಕೆ ಹಾನಿ ಉಂಟು ಮಾಡಿದೆ. ಈಗ ಈ ಘಟನೆ ಬಗ್ಗೆ ತಿಳಿದುಬಂದಿರುವ ಹೊಸ ವಿಚಾರ ಏನೆಂದರೆ, ಈ ಘಟನೆಯಲ್ಲಿ ತಪ್ಪಿತಸ್ಥರು ಯಾರು ಎಂದು ತಿಳಿಯಲು ಕೇಸ್ ಅನ್ನು CBI ಗೆ ವರ್ಗಾಯಿಸಲಾಗಿದೆ. ದಿನದಿಂದ ದಿನಕ್ಕೆ ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ಪಡೆಯುತ್ತಿರುವ ಪ್ರಕರಣದ ಬಗ್ಗೆ ಈಗ ನಟ ಕಿಶೋರ್ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ ನಟ ಕಿಶೋರ್..

kishore about odisha incident Actor Kishore:

ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಫೋಟೋ ಪೋಸ್ಟ್ ಮಾಡಿ… “ಯಾರ ಮೇಲೆ ಕಠಿಣ ಕ್ರಮ ? ಯಾರು ಕಾರಣ ?? ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ? ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ ಹಳಿ ನಿರ್ವಹಣೆ ಸಮರ್ಪಕವಾಗಿಸಬಹುದಿತ್ತೇ ?ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೇ ? ಇದನ್ನು ಓದಿ..Nikhil Kumaraswamy: ದೇಶವೇ ತಿರುಗಿನೋಡಿದ ಅಭಿಷೇಕ್ ಮದುವೆಗೆ, ನಿಖಿಲ್ ಯಾಕೆ ಹೋಗಿಲ್ಲ ಗೊತ್ತೇ?? ಅದೊಂದು ವಿಚಾರಣೆ ಕಾರಣನಾ?

ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2022 ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ??? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ… ಎಂಥ ವಿಪರ್ಯಾಸ!!! ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ.. ನಮ್ಮ ಸರ್ಕಾರ…

ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ, ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್ಮೆಂಟ್ ಮಾಡುತ್ತಾ ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದು ಕೊಂಡ ಪ್ರಾಣಗಳಿಗೆ ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು….ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ.. ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ…” ಎಂದು ಬರೆದಿದ್ದಾರೆ ನಟ ಕಿಶೋರ್. ಇದನ್ನು ಓದಿ..News: ಬಿಗ್ ಬ್ರೇಕಿಂಗ್; ಮಿಸ್ ಆಗಿ ಆಗಿಲ್ಲ ಒರಿಸ್ಸಾ ಘಟನೆ- CBI ತನಿಖೆಗೆ ವಹಿಸಿರುವುದೇ ಅದಕ್ಕೆ. ಅನುಮಾನ ವಾಸನೆ ಬಂದು ಕೊನೆಗೂ ತಿಳಿದಿದ್ದು ಏನು ಗೊತ್ತೇ?

Comments are closed.